ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ಕೂಸಿನ ಮನೆ ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಏನಿದು ಯೋಜನೆ?

ರಾಜ್ಯದಾದ್ಯಂತ 4,000 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ 'ಕೂಸಿನ ಮನೆ' ಶಿಶುಪಾಲನಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ

ಕರ್ನಾಟಕ ಸರ್ಕಾರ ಗ್ರಾಮೀಣ ಭಾಗದ ‌ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ತೆರೆಯಲಾಗುತ್ತಿರುವ ‘ಕೂಸಿನ ಮನೆ’ ಶಿಶುಪಾಲನಾ ಕೇಂದ್ರದ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನಾವರಣಗೊಳಿಸಿದರು.

ಭಾನುವಾರ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ನಡೆದ‌ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಧ್ವಜಾರೋಹಣದ ನಂತರ ಮುಖ್ಯಮಂತ್ರಿಗಳು,ಐ.ಟಿ-ಬಿ.ಟಿ ಸಚಿವ ಪ್ರಿಯಾಂಕ್ ಖರ್ಗೆ‌ ಸೇರಿದಂತೆ ಹಲವರು ಕೂಸಿನ ಮನೆ ಲಾಂಛನವನ್ನು ಬಿಡುಗಡೆ ಮಾಡಿದರು.

ಕೂಸಿನ ಮನೆ (Kusina mane) ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಕೋಳ್ಳಲು ಈ ಲೇಖನವನ್ನು ಸಂಪೂರ್ಣವಾಗಿ ಓದಿ.

ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ಕೂಸಿನ ಮನೆ ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಏನಿದು ಯೋಜನೆ? - Kannada News

ರಾಜ್ಯದಾದ್ಯಂತ 4,000 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ‘ಕೂಸಿನ ಮನೆ’ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಈ ಕೇಂದ್ರದಲ್ಲಿ ಮಕ್ಕಳನ್ನು ನೋಡಿಕೊಳ್ಳಲು ತರಬೇತಿ ಪಡೆದ ‘ಕೇರ್ ಟೇಕರ್ಸ್’ (Care taker)ಸಹ ನೇಮಕ ಮಾಡಲಾಗುತ್ತದೆ.

‘ಕೂಸಿನ ಮನೆ’ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ರಾಜ್ಯದಾದ್ಯಂತ 40 ಕೋಟಿ ರೂ. ವೆಚ್ಚದಲ್ಲಿ 4,000 ಗ್ರಾಮ ಪಂಚಾಯಿತಿ (Gram Panchayat) ಗಳಲ್ಲಿ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ (wage labor) ಮಕ್ಕಳ ಪಾಲನೆಗೆ ಕೂಸಿನ ಮನೆ ಶಿಶುಪಾಲನಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ” ಎಂದರು.

ಈ ಯೋಜನೆಗೆ ಸರ್ಕಾರ 40 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದರೂ ಸಹ ಶಿಶುಪಾಲನಾ ಕೇಂದ್ರ ನಡೆಸಲು ಅಗತ್ಯವಿರುವ ಕಟ್ಟಡ, ಇತರ ಮೂಲ ಸೌಲಭ್ಯಗಳನ್ನು ಹಾಗೂ ಅನುದಾನವನ್ನು ಗ್ರಾಮ ಪಂಚಾಯಿತಿಗಳು ತಮ್ಮ‌ ಸಂಪನ್ಮೂಲದಲ್ಲಿಯೇ ಹೊಂದಿಸಿಕೊಳ್ಳಬೇಕಾಗುತ್ತದೆ.

ಗ್ರಾಮೀಣ ಭಾಗದ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗೆ ಕೂಸಿನ ಮನೆ ಲಾಂಛನ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಏನಿದು ಯೋಜನೆ? - Kannada News

ಉದ್ಯೋಗದಲ್ಲಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ಕೂಲಿ ಕಾರ್ಮಿಕರ 3 ವರ್ಷದೊಳಗಿನ (Under 3 years) ಮಕ್ಕಳನ್ನು ನೋಡಿಕೊಳ್ಳಲು ‘ಕೂಸಿನ ಕೇಂದ್ರಗಳನ್ನು ( Day Care) ಸ್ಥಾಪಿಸಲಾಗಿದೆ.

ಈ ಕೇಂದ್ರಗಳು ಸ್ಥಳೀಯ ಕಾರ್ಮಿಕರ ಅನುಕೂಲಕ್ಕೆ ತಕ್ಕಂತೆ ದಿನದಲ್ಲಿ 6 ಗಂಟೆ 30 ನಿಮಿಷಗಳ ಕಾಲ ಕಾರ್ಯನಿರ್ವಹಿಸುತ್ತವೆ. ಸ್ಥಳೀಯ ಗ್ರಾಮ ಪಂಚಾಯಿತಿಗಳೇ ಕೇಂದ್ರದ ಕಾರ್ಯನಿರ್ವಹಿಸುವ ಸಮಯವನ್ನು ನಿರ್ಧರಿಸುತ್ತದೆ.
4000 ಶಿಶು ಪಾಲನಾ ಕೇಂದ್ರಗಳಿಗೆ ಪ್ರತಿ ಕೇಂದ್ರಕ್ಕೆ ನರೇಗಾ ಕ್ರಿಯಾಶೀಲ (Narega kriyasila) ಉದ್ಯೋಗ ಕಾರ್ಡ್ ಹೊಂದಿರುವ 10 ಜನ ಕೇರ್ ಟೇಕರ್ಸ್‌ಗಳನ್ನು (ಮಕ್ಕಳ ಆರೈಕೆದಾರರು) ಇರಲಿದ್ದಾರೆ.

ಇವರಿಗೆ ಮೊಬೈಲ್ ಕ್ರಶ್ ದೆಹಲಿ ಸಂಸ್ಥೆಯ ಸಹಕಾರದಿಂದ ತರಬೇತಿ ನೀಡಲಾಗುತ್ತದೆ. ಇದರಿಂದ 40,000 ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ ಮಹಿಳೆಯರಿಗೆ ಮಕ್ಕಳ ಆರೈಕೆಯ ಕೆಲಸ ನಿರ್ವಹಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಯೋಜನೆಯ ವಿವರದಂ ಳತೆ ಪ್ರತಿ ‘ಕೂಸಿನ ಮನೆ’ ಕೇಂದ್ರದಲ್ಲಿ ನರೇಗಾ ಕ್ರಿಯಾಶೀಲ ಉದ್ಯೋಗ ಕಾರ್ಡ್ ಹೊಂದಿರುವ ಕುಟುಂಬದ 3 ವರ್ಷದೊಳಗಿನ ಗರಿಷ್ಠ 25 ಮಕ್ಕಳನ್ನು ದಾಖಲೆ ಮಾಡಿಕೊಳ್ಳಲು ಅವಕಾಶ ನೀಡಲಾಗುತ್ತದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ (Minister Priyank Kharge), “ಶಿಶುಪಾಲನಾ ಕೇಂದ್ರಗಳನ್ನು ನಡೆಸಲು ಅಗತ್ಯವಿರುವ ಕಟ್ಟಡ ಇತರ ಮೂಲ ಸೌಲಭ್ಯಗಳನ್ನು ಹಾಗೂ ಅನುದಾನವನ್ನು ಗ್ರಾಮ ಪಂಚಾಯಿತಿಯಿಂದ ಒದಗಿಸಲು ಸೂಚನೆ ನೀಡಲಾಗಿದೆ” ಎಂದರು.‌

ನರೇಗಾ ಯೋಜನೆಯಡಿ ಜಾಬ್ ಕಾರ್ಡ್‌ (Job Card) ಪಡೆದುಕೊಂಡು ಕೆಲಸ ನಿರ್ವಹಣೆ ಮಾಡುತ್ತಿರುವ 22 ರಿಂದ 45 ವರ್ಷ ವಯೋಮಿತಿಯ ಕನಿಷ್ಠ 10ನೇ ತರಗತಿ ವ್ಯಾಸಂಗ ಮಾಡಿರುವ 10 ಜನ ಮಹಿಳಾ ಕೂಲಿ ಕಾರ್ಮಿಕರು ‘ಕೂಸಿನ ಮನೆ’ ಕೇರ್ ಟೇಕರ್ಸ್ ಆಗಿ ನೇಮಕಗೊಳ್ಳಲಿದ್ದಾರೆ.

ಇವರಿಗೆ ಪ್ರತ್ಯೇಕವಾದ ಗೌರವಧನವನ್ನು ನೀಡಲಾಗುವುದಿಲ್ಲ. ನರೇಗಾ ಯೋಜನೆಯಡಿ ಎನ್. ಎಂ. ಆರ್. ಸೃಜನೆ ಮಾಡಿ ದಿನಕ್ಕೆ 316 ರೂ. ನಂತೆ ನೂರು ದಿನಗಳ ತನಕ ಕೆಲಸ ನೀಡಲಾಗುತ್ತದೆ. ಒಂದು ವೇಳೆ ಕೆಲಸ ನಿರ್ವಹಣೆ ಮಾಡುತ್ತಿರುವ ಮಹಿಳೆ 100 ದಿನದ ಕೆಲಸ ನಿರ್ವಹಣೆ ಮಾಡಿದರೆ ಮತ್ತೊಬ್ಬರಿಗೆ ಅವಕಾಶ ನೀಡಲಾಗುತ್ತದೆ.

Comments are closed.