Air India express flight : ಶಾರ್ಜಾಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತ

ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ತಾಂತ್ರಿಕ ದೋಷದಿಂದ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

Newdelhi : ಶಾರ್ಜಾಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ತಾಂತ್ರಿಕ ದೋಷದಿಂದಾಗಿ ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ತಿರುಚಿನಾಪಲ್ಲಿಯಿಂದ ಶಾರ್ಜಾಕ್ಕೆ ತೆರಳುವ ಏರ್ ಇಂಡಿಯಾ ಎಕ್ಸ್‌ಪ್ರೆಸ್ 613 ಈ ವಿಮಾನವು ಸೋಮವಾರ ಮಧ್ಯಾಹ್ನ 12.03 ರ ಸುಮಾರಿಗೆ ತಿರುವನಂತಪುರಂ ಬಳಿಯ ತಿರುಚಿನಾಪಲ್ಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ವಿಮಾನದಲ್ಲಿದ್ದ ಪ್ರಯಾಣಿಕರು ಭಯಬೀತರಾಗಿದ್ದು, ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಯಾವುದೇ ಸಾವು ನೋವುಗಳು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Air India express flight : ಶಾರ್ಜಾಕ್ಕೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ದುರಂತ - Kannada News

ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಿಂದ ಎಲ್ಲಾ  ಪ್ರಯಾಣಿಕರು ಸುರಕ್ಷಿತವಾಗಿ ಹೊರಬಂದಿದ್ದರಿಂದ ಎಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ತುರ್ತು ಭೂಸ್ಪರ್ಶವಾದ  ವೇಳೆ ವಿಮಾನದಲ್ಲಿ 154 ಪ್ರಯಾಣಿಕರಿದ್ದರು ಎಂದು ಏರ್ ಇಂಡಿಯಾ ಪ್ರತಿನಿಧಿ ತಿಳಿಸಿದದ್ದು, ಈ ಘಟನೆಯ ಬಗ್ಗೆ ಸಂಪೂರ್ಣ ವಿವರಗಳು ಇನ್ನಷ್ಟೇ ಬಹಿರಂಗವಾಗಬೇಕಿದೆ.

Leave A Reply

Your email address will not be published.